ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: ಚಿಕ್ಕಬಳ್ಳಾಪುರದಲ್ಲಿ ₹4.8 ಕೋಟಿ ನಗದು ವಶ, ಕೆ.ಸುಧಾಕರ್ ವಿರುದ್ಧ FIR

Published 26 ಏಪ್ರಿಲ್ 2024, 6:03 IST
Last Updated 26 ಏಪ್ರಿಲ್ 2024, 6:03 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್‌ಎಸ್‌ಟಿ) ಅಧಿಕಾರಿಗಳು ₹4.8 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಕೋಮು ಸೌಹಾರ್ದತೆಗೆ ಧಕ್ಕೆ ತರಲು ಯತ್ನಿಸಿದ ಆರೋಪದಡಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮತದಾರರಿಗೆ ಬೆದರಿಕೆಯೊಡ್ಡಿದ್ದ ಆರೋಪದಡಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ಏಳು ಹಂತಗಳ ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4ರಂದು ಪ್ರಕಟಗೊಳ್ಳಲಿದೆ. ಏಪ್ರಿಲ್‌ 19ರಂದು ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT