ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖಾಮುಖಿ | ರಾಯ್‌ಬರೇಲಿ: ರಾಹುಲ್‌ ಗಾಂಧಿ vs ದಿನೇಶ್‌ ಪ್ರತಾಪ್‌ ಸಿಂಗ್‌

Published 7 ಮೇ 2024, 0:27 IST
Last Updated 7 ಮೇ 2024, 0:27 IST
ಅಕ್ಷರ ಗಾತ್ರ

ರಾಹುಲ್‌ ಗಾಂಧಿ (ಕಾಂಗ್ರೆಸ್‌)

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಲ್ಲೊಂದಾದ ರಾಯ್‌ಬರೇಲಿಯಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕಣಕ್ಕಿಳಿದಿದ್ದಾರೆ. ರಾಹುಲ್‌ ಅವರು ಕೇರಳದ ವಯನಾಡ್‌ ಕ್ಷೇತ್ರದಲ್ಲೂ ಸ್ಪರ್ಧಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಈ ಕ್ಷೇತ್ರದಲ್ಲಿ ಗೆದ್ದಿದ್ದರು. ರಾಹುಲ್‌ ಅವರು ಈ ಬಾರಿಯೂ ಅಮೇಠಿ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತಾರೆಂದು ಹೇಳಲಾಗಿತ್ತು. ಆದರೆ ಅವರನ್ನು ರಾಯ್‌ಬರೇಲಿಯಿಂದ ಅಖಾಡಕ್ಕಿಳಿಸುವ ಮೂಲಕ ಕಾಂಗ್ರೆಸ್‌ ಅಚ್ಚರಿ ಮೂಡಿಸಿದೆ. ಕಳೆದ ಬಾರಿ ಅವರು ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸ್ಫರ್ಧಿಸಿ ಸೋತಿದ್ದರು. ಇಲ್ಲಿಂದ ಐದು ಬಾರಿ ಗೆದ್ದು, ಸಂಸತ್‌ ಪ್ರವೇಶಿಸಿದ್ದ ಸೋನಿಯಾ ಗಾಂಧಿ ಅವರು ಚುನಾವಣಾ ರಾಜಕೀಯದಿಂದ ದೂರ ಸರಿದಿದ್ದು, ರಾಜ್ಯಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

.....

ದಿನೇಶ್‌ ಪ್ರತಾಪ್‌ ಸಿಂಗ್‌ (ಬಿಜೆಪಿ)

ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ದಿನೇಶ್‌ ಪ್ರತಾಪ್‌ ಸಿಂಗ್‌ ಅವರು ಸ್ಪರ್ಧಿಸುತ್ತಿದ್ದಾರೆ. 2019ರ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರು, 1,67,178 ಮತಗಳ ಅಂತರದಿಂದ ದಿನೇಶ್‌ ಪ್ರತಾಪ್‌ ಅವರನ್ನು ಪರಾಭವಗೊಳಿಸಿದ್ದರು. ಕಾಂಗ್ರೆಸ್‌ನಿಂದ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದ್ದ ದಿನೇಶ್‌ ಅವರು, 2018ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. 2010ರಲ್ಲಿ ಉತ್ತರ ಪ್ರದೇಶದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ಗಾಂಧಿ ಕುಟುಂಬದ ಪ್ರಾಬಲ್ಯವಿರುವ ಈ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದರೂ ಕಳೆದ ಚುನಾವಣೆಯಲ್ಲಿ ಅವರು 3,67,740 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮುಂದಿರಿಸಿ ಅವರು ಮತ ಯಾಚಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT