ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ಲೀಲತೆ ಪ್ರಸಾರ: 18 ಓಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಕೊಕ್

Published 14 ಮಾರ್ಚ್ 2024, 10:26 IST
Last Updated 14 ಮಾರ್ಚ್ 2024, 10:26 IST
ಅಕ್ಷರ ಗಾತ್ರ

ನವದೆಹಲಿ: ಅಶ್ಲೀಲ, ಅಸಭ್ಯ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದ 18 ಓಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಮತ್ತು ಅವುಗಳಿಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶ ಹೊರಡಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯ, ‘18 ಓಟಿಟಿ ಪ್ಲಾಟ್‌ಫಾರ್ಮ್‌ಗಳು, 19 ವೆಬ್‌ಸೈಟ್‌ಗಳು ಹಾಗೂ 10 ಆ್ಯಪ್‌ಗಳನ್ನು(ಗೂಗಲ್ ಸ್ಟೋರ್‌ನಿಂದ 7, ಆ್ಯಪಲ್‌ ಆ್ಯಪ್ ಸ್ಟೋರ್‌ನಿಂದ 3) ಮತ್ತು ಅವುಗಳಿಗೆ ಸಂಬಂಧಿಸಿದ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ’ ಎಂದು ತಿಳಿಸಿದೆ.

‘ಓಟಿಟಿ ವೇದಿಗಳ ವಿರುದ್ಧ ಈ ನಿರ್ಧಾರ ತೆಗೆದುಕೊಳ್ಳವ ಮುನ್ನ ಮಾಹಿತಿ ತಂತ್ರಜ್ಞಾನ ಕಾಯಿದೆ– 2000 ರ ನಿಬಂಧನೆಗಳ ಅಡಿಯಲ್ಲಿ ಸರ್ಕಾರದ ಇತರ ಸಚಿವಾಲಯಗಳು/ಇಲಾಖೆಗಳು, ಮಾಧ್ಯಮ ಮತ್ತು ಮನರಂಜನೆ, ಮಹಿಳಾ ಮತ್ತು ಮಕ್ಕಳ ಹಕ್ಕುಗಳ ತಜ್ಞರ ಜೊತೆಗೆ ಸಮಾಲೋಚಿಸಲಾಗಿದೆ’ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.

‘ಸೃಜನಾತ್ಮಕ ಅಭಿವ್ಯಕ್ತಿ ಹೆಸರಿನಲ್ಲಿ ಅಶ್ಲೀಲತೆ, ಅಸಭ್ಯ ಕಟೆಂಟ್‌ಗಳನ್ನು ಪ್ರಸಾರ ಮಾಡುವುದು ಓಟಿಟಿ ವೇದಿಕೆಗಳ ಕೆಲಸವಲ್ಲ’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT