ಬೆಂಗಳೂರು: ಇದೇ 22 ರಿಂದ ಮೇ 18 ರವರೆಗೆ ನಡೆಯುವ ದ್ವಿತೀಯ ಪಿಯು ಅಂತಿಮ ಪರೀಕ್ಷೆಗೆ ಹಾಜರಾಗುವವರು ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಅಥವಾ ಇತರ ಯಾವುದೇ ಧಾರ್ಮಿಕ ಆಚರಣೆಯ ಸಂಕೇತಗಳನ್ನು ಧರಿಸಿಕೊಂಡು ಬರುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಪರೀಕ್ಷಾ ಸಿದ್ಧತೆಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಅವರು, ಪರೀಕ್ಷಾ ಕೊಠಡಿಗಳಿಗೆ ಶಿಕ್ಷಕಿಯರೂ ಹಿಜಾಬ್ ಧರಿಸಿ ಬರುವಂತಿಲ್ಲ. ಇವುಗಳ ಬಗ್ಗೆ ಈಗಾಗಲೇ ಸುದೀರ್ಘ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಎಲ್ಲ ವಿಷಯಗಳನ್ನು ಸ್ಪಷ್ಟಪಡಿಸಲಾಗಿದೆ ಎಂದರು.

ಯಾವ ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿ ಮಾಡಲಾಗಿದೆಯೋ ಆ ಕಾಲೇಜಿನ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಕೊಂಡು ಹಾಜರಾಗಬೇಕು. ಯಾವ ಕಾಲೇಜುಗಳಲ್ಲಿ ಎಸ್‌ಡಿಎಂಸಿ ಸಮವಸ್ತ್ರ ನಿಗದಿ ಮಾಡಿಲ್ಲವೋ ಅಲ್ಲಿನ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಕೊಂಡು ಬರುವ ಅಗತ್ಯವಿಲ್ಲ. ಆದರೆ, ಎಲ್ಲೂ ಕೂಡ ಹಿಜಾಬ್ ಅಥವಾ ಧಾರ್ಮಿಕ ಆಚರಣೆಯ ಸಂಕೇತಗಳನ್ನು ಪರೀಕ್ಷಾ ಕೊಠಡಿಯೊಳಗೆ ಧರಿಸಿ ಬರುವಂತಿಲ್ಲ. ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಅಲ್ಲದೇ, ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಮತ್ತು ಇತರ ಶ್ರವಣ ಸಾಧನಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.

ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ:

ಪ್ರಶ್ನೆಗಳ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಹಿಂದಿನ ವರ್ಷಗಳ ಅನುಭವದ ಆಧಾರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ವ್ಯವಸ್ಥೆ ದುಬಾರಿ ಆದರೂ, ಅಗತ್ಯವಿದೆ. ಜಿಲ್ಲಾ ಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಿಸಿದ ಕೊಠಡಿಗಳ ಸುತ್ತ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ಪ್ರತಿಯೊಬ್ಬರ ಚಲನ ವಲನದ ಮೇಲೂ ನಿಗಾ ಇಡಲಾಗುತ್ತದೆ. ಪ್ರಶ್ನೆ ಪತ್ರಿಕೆ ಕೊಠಡಿಗೆ ಹೋಗುವವರ ವಿಡಿಯೋ ರೆಕಾರ್ಡ್ ಆಗುತ್ತದೆ ಎಂದು ನಾಗೇಶ್ ಹೇಳಿದರು.

ಪರೀಕ್ಷಾ ಅಕ್ರಮಗಳ ತಡೆಗೆ 2152 ವಿಶೇಷ ಜಾಗೃತ ದಳ ರಚಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ 858, ಜಿಲ್ಲಾ ಮಟ್ಟದಲ್ಲಿ 64 ಜಾಗೃತ ದಳವನ್ನು ನಿಯೋಜಿಸಲಾಗುವುದು ಎಂದರು.

ಒಟ್ಟು 81 ಮೌಲ್ಯಮಾಪನ ಕೇಂದ್ರಗಳನ್ನು ರಾಜ್ಯಾದ್ಯಂತ ನಿಗದಿ ಮಾಡಲಾಗಿದೆ. ಹೊಸದಾಗಿ ತುಮಕೂರು, ಹಾಸನ, ಬಳ್ಳಾರಿ ಜಿಲ್ಲೆಗಳಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.