ಹೊನ್ನಾವರ (ಉತ್ತರ ಕನ್ನಡ):  ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ ಪೊಲೀಸರು, ಬುಧವಾರ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ‘ಬಿ’ ರಿಪೋರ್ಟ್ (ಆರೋಪ ಸಾಬೀತಾಗಿಲ್ಲ) ಸಲ್ಲಿಸಿದ್ದಾರೆ.

‘ಸ್ವಾಮೀಜಿ ಅವರಿಗೆ ₹ 3 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಬೆಂಗಳೂರಿನ ದಿವಾಕರ ಶಾಸ್ತ್ರಿ, ಅವರ ಪತ್ನಿ ಪ್ರೇಮಲತಾ ಶಾಸ್ತ್ರಿ ಹಾಗೂ ಸೋದರ ನಾರಾಯಣ ಶಾಸ್ತ್ರಿ ಅವರು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ತಾಲ್ಲೂಕಿನ ಹಳದೀಪುರದ ಬಿ.ಆರ್. ಚಂದ್ರಶೇಖರ ಎಂಬುವವರು 2014 ಆಗಸ್ಟ್ 17ರಂದು ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧರಿಸಿ, ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಸಿಐಡಿ ತನಿಖಾ ತಂಡವು ಬಿ–ರಿಪೋರ್ಟ್ ಸಲ್ಲಿಸಿದೆ. ಇದರ ವಿರುದ್ಧ ದೂರುದಾರರು ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಡಿವೈಎಸ್‌ಪಿ ಮಲ್ಲೇಶ ನೇತೃತ್ವದಲ್ಲಿ ಸಿಐಡಿ ತಂಡ ಪ್ರಕರಣದ ತನಿಖೆ ಕೈಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.