ಹುಬ್ಬಳ್ಳಿ: ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂಬ ಬೇಡಿಕೆ ಈಡೇರಿಕೆಗಾಗಿ, ಇದೇ 27ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗಿದೆ.

'ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 12, 859 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ, ಅವರ ವೇತನವನ್ನು ₹1,500 ಹೆಚ್ಚಿಸಿದೆಯಾದರೂ ಉದ್ಯೋಗ ಭದ್ರತೆ ಇಲ್ಲದ ಕಾರಣ ಜೀವನ ನಿರ್ವಹಣೆ ಕಷ್ಟವಾಗಿದೆ. ಈ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಉದ್ಘಾಟಿಸುವರು' ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ಹನುಮಂತಗೌಡ ಆರ್. ಕಲ್ಮನಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.