ಉಡುಪಿ: ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಅವರ ಸಂಕಲ್ಪದಂತೆ ಪಾಜಕ ಕ್ಷೇತ್ರ ಸಮೀಪದ ಕುಂಜಾರುಗಿರಿಯಲ್ಲಿ ಮಧ್ವಾಚಾರ್ಯರ ಏಕಶಿಲಾ ಮೂರ್ತಿಯನ್ನು ಸೋಮವಾರ ಪ್ರತಿಷ್ಠಾಪನೆ ಮಾಡಲಾಯಿತು.

ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ಬೆಳಿಗ್ಗೆ 5ರಿಂದಲೇ ಆರಂಭವಾದವು. ತತ್ವ ಹೋಮ, ತತ್ವ ಕಲಶಹೋಮ, ನಾರಾಯಣ ಪವಿತ್ರ ಹೋಮ, ವಿಷ್ಣು ಗಾಯತ್ರಿ ಮಂತ್ರ ಹೋಮ, ಪ್ರಾಣ ಪ್ರತಿಷ್ಠೆ ಮತ್ತು ಬಿಂಬ ಪ್ರತಿಷ್ಠೆ ಮಾಡಲಾಯಿತು.

ಪ್ರತಿಷ್ಠಾಂಗ ಹೋಮ ನಡೆಸಿದ ನಂತರ ಬೆಳಿಗ್ಗೆ 9.6ರ ಶುಭ ಮುಹೂರ್ತದಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಆ ನಂತರ ಮೂರ್ತಿಗೆ ಕ್ಷೀರ ಹಾಗೂ ಪಂಚಾಮೃತ ಅಭಿಷೇಕ ಮಾಡಲಾಯಿತು.

ನೂರಾರು ಮಂದಿ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.