ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರನ್ನು ರಾಷ್ಟ್ರಪತಿ ಹುದ್ದೆ ಅಭ್ಯರ್ಥಿಯಾಗಿ ವಿಪಕ್ಷಗಳ ಪರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಘೋಷಿಸಿದರು.

2009–14ರ ವರೆಗೂ ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿರುವ ಮೀರಾ ಕುಮಾರ್ ವಕೀಲರಾಗಿಯೂ ಸೇವೆ ಸಲ್ಲಿಸಿದ್ದು, ಐದು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

17 ಪಕ್ಷಗಳ ಮುಖಂಡರು ಸೇರಿದ್ದ ವಿಪಕ್ಷಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭ್ಯರ್ಥಿ ಆಯ್ಕೆ ಘೋಷಿಸಿದರು.

ರಾಷ್ಟ್ರಪತಿ ಹುದ್ದೆಗೆ ಮೀರಾ ಕುಮಾರ್ ಅವರಿಗಿಂತಲೂ ಉತ್ತಮ ಅಭ್ಯರ್ಥಿಯಿಲ್ಲ ಎಂದು ರಾಜ್ಯ ಸಭೆ ವಿಪಕ್ಷ ಮುಖಂಡ ಗುಲಾಮ್ ನಬಿ ಆಜಾದ್ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.