ಮೂಡುಬಿದಿರೆ: ಇಲ್ಲಿಯ ವರ್ಧಮಾನ ಪ್ರಶಸ್ತಿ ಪೀಠವು 2016ರ ಸಾಲಿನಲ್ಲಿ ವರ್ಷದ ಶ್ರೇಷ್ಠ ಕನ್ನಡ ಸಾಹಿತ್ಯ ಕೃತಿಗೆ ನೀಡುವ ವರ್ಧಮಾನ ಸಾಹಿತ್ಯ ಪ್ರಶಸ್ತಿಯನ್ನು ಬೆಂಗಳೂರಿನ ಪ್ರೊ. ಕೆ.ಇ.ರಾಧಾಕೃಷ್ಣ ಅವರ ‘ಕಣ್ಣಕಾಡು’ ಎನ್ನುವ ಮಹಾಕಾವ್ಯಕ್ಕೆ ಮತ್ತು ವರ್ಷದ ಶ್ರೇಷ್ಠ ವರ್ಧಮಾನ ಉದಯೋನ್ಮುಖ ಸಾಹಿತ್ಯ ಕೃತಿಗೆ ನೀಡುವ ಪ್ರಶಸ್ತಿಯನ್ನು ಬೆಂಗಳೂರಿನ ಸತ್ಯಮಂಗಲ ಆರ್. ಮಹಾದೇವ ಅವರ ‘ಹೆಜ್ಜೆ ಮೂಡಿದ ಮೇಲೆ’ ಎನ್ನುವ ಕಾವ್ಯ ಕೃತಿಗೆ ನೀಡಲು ನಿರ್ಧರಿಸಿದೆ.

ಪೀಠದ ಅಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ.ನಾ.ಮೊಗಸಾಲೆ ತಿಳಿಸಿದ್ದಾರೆ.

ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯುವ ದಸರಾ ಸಾಹಿತ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವರ್ಧಮಾನ ಸಾಹಿತ್ಯ ಪ್ರಶಸ್ತಿಯು ₹25 ಸಾವಿರ ಮತ್ತು ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ₹15 ಸಾವಿರದ ಗೌರವ ಸಂಭಾವನೆ ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.