ಶಿವಮೊಗ್ಗ: ತಾಲ್ಲೂಕಿನ ಪಿಳ್ಳಂಗಿರಿಯ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಎನ್.ರಮ್ಯಾ ಶಿವಮೊಗ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 4ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾಳೆ.

ಆಗಸ್ಟ್ 11ರಂದು ನಗರದ ಡಿವಿಎಸ್ ರಂಗಮಂದಿರದಲ್ಲಿ ಸಮ್ಮೇಳನ ನಡೆಯಲಿದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾಳೆ. ಈಚೆಗೆ ನಡೆದ ಪ್ರಾಚ್ಯವಸ್ತು ಇಲಾಖೆಯ ಭಾಷಣ ಸ್ಫರ್ಧೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘ನಾ ಮೆಚ್ಚಿದ ಜಿಲ್ಲೆಯ ಸಾಹಿತಿ’ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾಳೆ.

ರಮ್ಯಾ ಮೀನುಗಾರಿಕೆ ವೃತ್ತಿ ನಡೆಸುವ ನಂಜುಂಡ ಹಾಗೂ ನಾಗಮ್ಮ ಅವರ ಪುತ್ರಿಯಾಗಿದ್ದಾಳೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.