ಬೆಂಗಳೂರು:  ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಮಂಗಳವಾರ ರಾತ್ರಿ 8 ಸುಮಾರಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ನಗರದ ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯಲ್ಲಿ ಈ ಗುಂಡಿನ ದಾಳಿ ನಡೆದಿದೆ.

ಗೌರಿ ಲಂಕೇಶ್ ಅವರು ಮನೆಯ ಬಾಗಿಲ ಬೀಗ ತೆಗೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಎದೆ ಹಾಗೂ ಹಣೆಯ ಭಾಗಕ್ಕೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಆಗ ಗೌರಿ ಲಂಕೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸಂಬಂಧಿಕರು, ಪೊಲೀಸರು ನೂರಾರು ಮಂದಿ ಜಮಾಯಿಸಿದ್ದಾರೆ. ಅಲ್ಲದೇ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.