ಮಂಗಳೂರು: ನಗರದಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಇಬ್ಬರಲ್ಲಿ ನಿಫಾ ವೈರಸ್ ಇರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರೂ ರೋಗಿಗಳ ಗಂಟಲು ದ್ರವದ ಮಾದರಿಯನ್ನು ಮಣಿಪಾಲ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಗಾಗಿ ಕಾಯಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ತಿಳಿಸಿದ್ದಾರೆ.

ಇವರಲ್ಲಿ ಒಬ್ಬರು ಕೇರಳದಿಂದ ಬಂದವರು ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಬರುವ ಜನರ ಮೇಲೆ ನಿಗಾ ಇರಿಸಲಾಗಿದೆ. ಕೇರಳದ ಅನೇಕ ವಿದ್ಯಾರ್ಥಿಗಳು ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್ ವಾರ್ಡನ್‌ಗಳಿಗೂ ಈ ಕುರಿತು ಪತ್ರ ಬರೆಯಲಾಗುವುದು ಎಂದರು.

ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಒಳಗೊಂಡ ವಾಟ್ಸ್‌ಆ್ಯಪ್ ಗ್ರೂಪ್ ಆರಂಭಿಸಲಾಗುತ್ತಿದ್ದು, ನಿಫಾ ವೈರಸ್‌ನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಸಂದೇಶ ಸಿಗಲಿದೆ. ಇದರಿಂದ ಕೂಡಲೇ ರೋಗಿಯ ಮೇಲೆ ನಿಗಾ ವಹಿಸುವ ಮೂಲಕ ರೋಗ ಉಲ್ಬಣವಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.