ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಖಾಘಾತ: ಕೇರಳದಲ್ಲಿ ವೃದ್ಧೆ ಸಾವು

Published 28 ಏಪ್ರಿಲ್ 2024, 16:20 IST
Last Updated 28 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ಪಾಲಕ್ಕಾಡ್‌/ತಿರುವನಂತಪುರ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಶಾಖಾಘಾತದಿಂದ (ಬಿಸಿಲಿನ ತಾಪ) ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಎಡಪ್ಪುಳ್ಳಿ ಗ್ರಾಮದ ಕಾಲುವೆಯಲ್ಲಿ 90 ವರ್ಷದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ. ಬುದ್ಧಿಮಾಂದ್ಯ ರೋಗಿಯಾಗಿದ್ದ ಮಹಿಳೆ  ಮನೆಯಿಂದ ಹೊರಗೆ ಬಂದ ನಂತರ ಶಾಖಾಘಾತಕ್ಕೆ ಸಿಲುಕಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ದೇಹದ ಮೇಲೆ ಸುಟ್ಟ ಗಾಯಗಳು ಕಂಡುಬಂದಿದ್ದು, ಶಾಖಾಘಾತ ದೃಢಪಟ್ಟಿದೆ ಎಂದು ಪಾಲಕ್ಕಾಡ್ ಜಿಲ್ಲಾ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವಾರ, ಜಿಲ್ಲೆಯಲ್ಲಿ ಶಾಖಾಘಾತದ ಸುಟ್ಟ ಗಾಯಗಳಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು ಎಂದು ಅವರು ಹೇಳಿದ್ದಾರೆ.

12 ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದ ಎಚ್ಚರಿಕೆ:

ತೀವ್ರ ಬಿಸಿಲಿನ ತಾಪಕ್ಕೆ ಕೇರಳ ತತ್ತರಿಸುತ್ತಿದ್ದು, ಮುಂದಿನ ಐದು ದಿನಗಳು 12 ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆಯು ನೀಡಿದೆ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಜನರು ಮನೆಯಿಂದ ಹೊರಬರದಂತೆ ಸಲಹೆ ನೀಡಲಾಗಿದೆ.

ಕೊಲ್ಲಂ, ಪಾಲಕ್ಕಾಡ್ ಮತ್ತು ತ್ರಿಶೂರ್ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್‌ ಮತ್ತು ಕೊಲ್ಲಂನಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಕಂಡುಬರಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ದಿನನಿತ್ಯವು ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿಗಳನ್ನು ಒಂದು ವಾರದವರೆಗೆ ತೆರೆಯದಿರಲು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT