ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌

Published 24 ಏಪ್ರಿಲ್ 2024, 6:49 IST
Last Updated 24 ಏಪ್ರಿಲ್ 2024, 6:49 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟಿಸದ ಹೈಕೋರ್ಟ್ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರ್ಖಂಡ್‌ ಮುಕ್ತಿ ಮೋರ್ಚಾದ (ಜೆಎಂಎಂ) ನಾಯಕರೂ ಆಗಿರುವ ಹೇಮಂತ್‌ ಸೊರೇನ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ. ತಮ್ಮ ಬಂಧನ ಪ್ರಶ್ನಿಸಿ ಸೊರೇನ್‌ ಜಾರ್ಖಂಡ್ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಫೆಬ್ರುವರಿ 1ರಂದು ಸೊರೇನ್‌ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಹಾಗೂ ನ್ಯಾಯಮೂರ್ತಿ ಅನುಭಾ ರಾವತ್ ಚೌಧರಿ ಅವರ ಪೀಠವು ವಿಚಾರಣೆ ನಡೆಸಿತ್ತು. ಬಳಿಕ ವಿಚಾರಣೆಯನ್ನು ಫೆಬ್ರುವರಿ 27ಕ್ಕೆ ಮುಂದೂಡಿತ್ತು.

ಸುಮಾರು ₹600 ಕೋಟಿ ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದ ಹಿನ್ನೆಲೆ ಸೊರೇನ್‌ ಅವರನ್ನು ಇ.ಡಿ ಬಂಧಿಸಿತ್ತು. ಬಂಧನಕ್ಕೂ ಮುನ್ನ ಸೊರೇನ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT