ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ ಉಪಚುನಾವಣೆ: ಕಣಕ್ಕಿಳಿದ ಸೊರೇನ್‌ ಪತ್ನಿ ಕಲ್ಪನಾ MTech, MBA ಪದವೀಧರೆ

Published 25 ಏಪ್ರಿಲ್ 2024, 13:19 IST
Last Updated 25 ಏಪ್ರಿಲ್ 2024, 13:19 IST
ಅಕ್ಷರ ಗಾತ್ರ

ರಾಂಚಿ: ಜೈಲಿನಲ್ಲಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಪತ್ನಿ ಕಲ್ಪನಾ ಗಾಂಡೇಯ್ ಕ್ಷೇತ್ರದಿಂದ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಮ್‌ಎಮ್‌) ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷ ಘೋಷಿಸಿದೆ.

ಗಿರಿಡೀಹ್‌ ಜಿಲ್ಲೆಯಲ್ಲಿನ ಈ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್‌ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿತ್ತು. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.

ಎಂ.ಟೆಕ್‌ ಮತ್ತು ಎಂಬಿಎ ಪದವೀಧರೆಯಾಗಿರುವ ಕಲ್ಪನಾ ಅವರ ರಾಜಕೀಯ ಪಯಣ ಮಾರ್ಚ್‌ 4ರಂದು ನಡೆದ ಜೆಎಂಎಂ ಪಕ್ಷದ ಸ್ಥಾಪನಾ ದಿನದ ಕಾರ್ಯಕ್ರಮದಂದು ಆರಂಭವಾಯಿತು. ಈ ವೇಳೆ ಮಾತನಾಡಿದ್ದ ಅವರು, ‘2019 ರಲ್ಲಿ ಹೇಮಂತ್ ಸೋರೆನ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿರೋಧಿಗಳು ಸಂಚು ರೂಪಿಸಿ ನನ್ನ ಪತಿಯನ್ನು ಕಂಬಿ ಹಿಂದೆ ಕಳುಹಿಸಿದ್ದಾರೆ. ಅವರಿಗೆ ತಕ್ಕ ಉತ್ತರ ನೀಡುತ್ತೇನೆ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT