ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಸುದ್ದಿ: ರಾಹುಲ್‌ ಗಾಂಧಿ ವಿರುದ್ಧ ಶಿಕ್ಷಣ ತಜ್ಞರ ಪತ್ರ

Published 6 ಮೇ 2024, 13:03 IST
Last Updated 6 ಮೇ 2024, 13:03 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿಶ್ವವಿದ್ಯಾಲಯಗಳ ಮುಖ್ಯಸ್ಥರ ನೇಮಕಾತಿ ಪ್ರಕ್ರಿಯೆ ಬಗ್ಗೆ ‘ಸುಳ್ಳು ಸುದ್ದಿ’ ಹರಡುತ್ತಿದ್ದಾರೆ ಎಂದು ಕುಲಪತಿಗಳು, ಮಾಜಿ ಕುಲಪತಿಗಳು ಸೇರಿದಂತೆ 181 ಮಂದಿ ಶಿಕ್ಷಣ ತಜ್ಞರು ಆರೋಪಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 

ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ಅವರು, ವಿಶ್ವವಿದ್ಯಾಲಯಗಳ ಮುಖ್ಯಸ್ಥರನ್ನು ಅರ್ಹತೆ ಆಧಾರದಲ್ಲಿ  ನೇಮಕ ಮಾಡುವ ಬದಲಾಗಿ ಕೆಲವು ಸಂಸ್ಥೆಗಳ ಶಿಫಾರಸಿನ ಮೇಲೆ ನೇಮಕ ಮಾಡಲಾಗುತ್ತಿದೆ ಎಂದು  ಆರೋಪಿಸಿದ್ದಾರೆ. ಆದರೆ ಶೈಕ್ಷಣಿಕ ಸಾಧನೆ, ಅರ್ಹತೆ ಆಧಾರದಲ್ಲಿ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ಹೇಳಿದ್ದಾರೆ.

ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಕುಲಪತಿ ಶಾಂತಿಶ್ರೀ ಧೂಲಿಪುಡಿ ಪಂಡಿತ್‌, ದೆಹಲಿ ವಿಶ್ವವಿದ್ಯಾಲಯದ ಕುಲಪತಿ ಯೋಗೇಶ್‌ ಸಿಂಗ್‌ ಮತ್ತು ಎಐಸಿಟಿಇ ಮುಖ್ಯಸ್ಥ ಟಿ.ಜಿ. ಸೀತಾರಾಮ್‌ ಮತ್ತಿತರರು ಪತ್ರಕ್ಕೆ ಸಹಿ ಮಾಡಿದ್ದಾರೆ.

ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪ್ರಕ್ರಿಯೆ. ಇದು ವಿಶ್ವವಿದ್ಯಾಲಯಗಳನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯುವ ಉದ್ದೇಶ ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಭಾರತದ ವಿಶ್ವವಿದ್ಯಾಲಯಗಳಲ್ಲಿ ಮಹತ್ತರ ಬದಲಾವಣೆಗಳಾಗುತ್ತಿವೆ. ಜಾಗತಿಕ ರ‍್ಯಾಂಕಿಂಗ್‌, ವಿಶ್ವದರ್ಜೆಯ ಸಂಶೋಧನೆ ಮತ್ತು ಹಲವು ಆವಿಷ್ಕಾರಗಳೇ ಇದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ನೇಮಕಾತಿ ಪ್ರಕ್ರಿಯೆಯು ನಿಷ್ಪಕ್ಷಪಾತ ಮತ್ತು ಎಲ್ಲರನ್ನು ಒಳಗೊಳ್ಳುವ ಉದ್ದೇಶ ಹೊಂದಿದೆ. ರಾಹುಲ್‌ ಗಾಂಧಿ ಅವರು ರಾಜಕೀಯ ಲಾಭಕ್ಕಾಗಿ ಸುಳ್ಳುಸುದ್ದಿ ಹರಡುವ ಮೂಲಕ ಕುಲಪತಿಗಳ ಕಚೇರಿಗೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT