ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದ ಸಾವು; ಆರೋಪಿಗಳಿಗೆ ಕನಿಷ್ಠ ಶಿಕ್ಷೆ ಅಗತ್ಯ: ಹೈಕೋರ್ಟ್

Published 8 ಮೇ 2024, 15:59 IST
Last Updated 8 ಮೇ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ‘ಅಜಾಗರೂಕಯಿಂದ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾಗುವವರಿಗೆ ಕನಿಷ್ಠ ಶಿಕ್ಷೆ ವಿಧಿಸದೇ ಇದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅಪಘಾತ ಪ್ರಕರಣದಲ್ಲಿ ಶಿಕ್ಷೆಯನ್ನು ಖಚಿತಪಡಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಸಂತೋಷ್ ಸಲ್ಲಿಸಿದ್ದ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಜಾಗರೂಕತೆಯಿಂದ ಆಂಬುಲೆನ್ಸ್ ಚಲಾಯಿಸಿ ಮತ್ತೊಂದು ಕಾರಿನ ಚಾಲಕನ ಸಾವಿಗೆ ಕಾರಣವಾಗಿರುವ ಸಂತೋಷ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಆರು ತಿಂಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸಲು ನ್ಯಾಯಪೀಠ ನಿರಾಕರಿಸಿದೆ.

‘ಅಪಘಾತ ಪ್ರಕರಣಗಳ ಅಪರಾಧಿಗಳಿಗೆ ಶಿಕ್ಷೆ ವಿಧಿಸದೇ ಹೋದರ ಮನುಷ್ಯನ ಜೀವಕ್ಕೆ ಬೆಲೆಯೇ ಇಲ್ಲದಂತಾಗಲಿದೆ’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT