ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಭ್ರಷ್ಟಾಚಾರ | ತನಿಖಾ ಆಯೋಗಕ್ಕೆ ಯತ್ನಾಳ ದಾಖಲೆ ನೀಡಲಿ: ಸಿದ್ದರಾಮಯ್ಯ

Published 30 ಡಿಸೆಂಬರ್ 2023, 8:22 IST
Last Updated 30 ಡಿಸೆಂಬರ್ 2023, 8:22 IST
ಅಕ್ಷರ ಗಾತ್ರ

ಕೊಪ್ಪಳ: ಕೋವಿಡ್ ಹೆಸರಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ₹ 40 ಸಾವಿರ ಕೋಟಿ ಅಕ್ರಮ ನಡೆಸಿದೆ ಎಂದು ಆರೋಪ ಮಾಡಿರುವ ಆ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತನಿಖಾ ಆಯೋಗಕ್ಕೆ ಈ ಕುರಿತು ದಾಖಲೆ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಂಧನೂರಿಗೆ ತೆರಳುವ ಮೊದಲು ಇಲ್ಲಿಗೆ ಸಮೀಪದ ಬಸಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಯತ್ನಾಳ ನೇರ ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರದ‌ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣ ಕುರಿತು ತನಿಖೆಗಾಗಿ ಆಯೋಗ ರಚಿಸಿದ್ದೇವೆ. ಆರೋಪ ಮಾಡಿದವರು ಆಯೋಗಕ್ಕೆ ದಾಖಲೆಗಳನ್ನು ಒದಗಿಸಬೇಕು ಎಂದರು.

ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಿದ್ದಕ್ಕೆ ಎಚ್.ಡಿ.ಕುಮಾರಸ್ವಾಮಿ 'ರಾಯರಡ್ಡಿ ಆರ್ಥಿಕ ತಜ್ಞರೇ' ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಕೇಳಲಾದ ಪ್ರಶ್ನೆಗೆ 'ರಾಯರಡ್ಡಿ ಆರ್ಥಿಕವಾಗಿ ಸಾಕಷ್ಟು ವಿಷಯ ತಿಳಿದುಕೊಂಡಿದ್ದಾರೆ. ಹಾಗಾಗಿ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಯಡಿಯೂರಪ್ಪ ಸಿಎಂ ಇದ್ದಾಗಲೂ ಆರ್ಥಿಕ ಸಲಹೆಗಾರರನ್ನು ನೇಮಿಸಿಕೊಂಡಿದ್ದರು. ಆವಾಗ ಯಾರೂ ಕೇಳಲಿಲ್ಲ' ಎಂದರು.

ಬಳಿಕ ಕುಮಾರಸ್ವಾಮಿ ಆರೋಪಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಡಿಸಿ ವಿರುದ್ಧ ಗರಂ: ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀಯ ಕೆಲ ಫಲಾನುಭವಿಗಳಿಗೆ ಎರಡ್ಮೂರು ತಿಂಗಳಿಂದ ಹಣ ಬಂದಿಲ್ಲ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದರು.

ಇದಕ್ಕೆ ಪಕ್ಕದಲ್ಲಿಯೇ ಇದ್ದ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರನ್ನು ಪ್ರಶ್ನಿಸಿದಾಗ ಕೆಲವರಿಗೆ ಜಮೆಯಾಗಿದೆ, ಇನ್ನೂ ಕೆಲವರಿಗೆ ಆಗುತ್ತಿದೆ ಎಂದರು. ಇದರಿಂದ ಮುಖ್ಯಮಂತ್ರಿ ಗರಂ ಆದರು.

ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT