ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಸುಪ್ರೀಂ ಕೋರ್ಟ್‌ಗೆ ಸಿಎಂ ಧನ್ಯವಾದ

Published 22 ಏಪ್ರಿಲ್ 2024, 15:43 IST
Last Updated 22 ಏಪ್ರಿಲ್ 2024, 15:43 IST
ಅಕ್ಷರ ಗಾತ್ರ

ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಭರವಸೆ ನೀಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ ಸಿದ್ದರಾಮಯ್ಯ, ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ತಿಳಿಸಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಪ್ರತ್ಯುತ್ತರವಾಗಿ, ಕರ್ನಾಟಕ ಬರ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದೊಂದು ಮೈಲಿಗಲ್ಲು. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುಧೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ ಎಂದು ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT