ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ಬಿಡುಗಡೆ: ಕೇಂದ್ರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಾಳೆ- ಸಿಎಂ

Published 27 ಏಪ್ರಿಲ್ 2024, 10:06 IST
Last Updated 27 ಏಪ್ರಿಲ್ 2024, 10:06 IST
ಅಕ್ಷರ ಗಾತ್ರ

ಬಾಗಲಕೋಟೆ: 'ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ₹18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಭಾನುವಾರ ಪತ್ರಿಭಟನೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 'ನಾನು, ಉಪಮುಖ್ಯಮಂತ್ರಿ, ಸಚಿವರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ' ಎಂದರು.

ನ್ಯಾಯಾಲಯದ ಮೊರೆ ಹೋದ ಮೇಲೆ ಕೇಂದ್ರ ₹3,498 ಕೋಟಿ ಬರ ಪರಿಹಾರ ಮಾತ್ರ ಬಿಡುಗಡೆ ಮಾಡಿದೆ. ಪೂರ್ಣ ಬಿಡುಗಡೆ ಮಾಡುವವರೆಗೂ ನ್ಯಾಯಾಲಯದಲ್ಲಿಯೂ ಹೋರಾಟ ಮುಂದುವರೆಯಲಿದೆ ಎಂದರು.

ಕೇಂದ್ರ ಸಚಿವ ಅಮಿತ್ ಶಾ, ವಿಳಂಬವಾಗಿ ಕರ್ನಾಟಕ ಅರ್ಜಿ ಸಲ್ಲಿಸಿದ್ದರಿಂದ ಬರ ಪರಿಹಾರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಸುಳ್ಳು ಹೇಳಿದ್ದರು ಎಂದು ವಾಗ್ದಾಳಿ ನಡೆಸಿದರು.

ಕಪ್ಪು ಹಣ ವಾಪಸ್ ತರಲಿಲ್ಲ, ರೈತರ ಆದಾಯ ದುಪ್ಪಟ್ಟು ಮಾಡಲಿಲ್ಲ. ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಇಳಿಸಲಿಲ್ಲ. ಪ್ರಧಾನಿ ಮೋದಿ ಮಾತಿಗೆ ತಪ್ಪಿದ್ದಾರೆ ಎಂದು ಟೀಕಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT