ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಹೆಸರು ಹಾಗೂ ಫೋಟೊ ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಲಾಗಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯಪಾಲರ ಹೆಸರು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ವಿಶೇಷ ಕಾರ್ಯದರ್ಶಿ ಆಗಸ್ಟ್ 31ರಂದು ದೂರು ನೀಡಿದ್ದಾರೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.