ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಸಂಪರ್ಕಿತರಿಗೂ ಪರೀಕ್ಷೆಗೆ ಸೂಚನೆ

Published 28 ಡಿಸೆಂಬರ್ 2023, 14:59 IST
Last Updated 28 ಡಿಸೆಂಬರ್ 2023, 14:59 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿನ ಲಕ್ಷಣ ಹೊಂದಿರುವವರ ಸಂಪರ್ಕಿತರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ‘ರಾಜ್ಯದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್‌ನ ಉಪತಳಿ ಜೆಎನ್‌.1 ಪ್ರಕರಣಗಳು ಪತ್ತೆಯಾಗಿವೆ. ಈಗ ವೈರಾಣು ಹರಡುವಿಕೆ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಕೋವಿಡ್ ಪರೀಕ್ಷೆಯು ಸೋಂಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಸಹಕಾರಿಯಾಗಿದೆ. ಆದ್ದರಿಂದ ಸೋಂಕಿನ ಲಕ್ಷಣಗಳನ್ನು ಹೊಂದಿರುವವರ ಜತೆಗೆ ಅವರ ಸಂಪರ್ಕಿತರಿಗೂ ಪರೀಕ್ಷೆ ಮಾಡಲಾಗುತ್ತದೆ. ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ಸದ್ಯ ನಾಲ್ಕು ನೂರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಹೆಚ್ಚಿನವರು ಮನೆ ಆರೈಕೆಗೆ ಒಳಗಾಗಿದ್ದು, ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್ ಸೇರಿ ವಿವಿಧ ಆರೋಗ್ಯ ಕೇಂದ್ರಗಳ ವೈದ್ಯರು ಸೋಂಕಿತರಿಗೆ ಚಿಕಿತ್ಸೆ ಹಾಗೂ ಆರೈಕೆ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯ ಆರೋಗ್ಯಾಧಿಕಾರಿಗಳು ಇದರ ಮೇಲ್ವಿಚಾರಣೆ ಮಾಡಬೇಕು’ ಎಂದು ತಿಳಿಸಿದ್ದಾರೆ. 

‘ತೀವ್ರ ನಿಗಾ ಘಟಕದಲ್ಲಿ (ಐಸಿಯು) ದಾಖಲಾಗಿರುವ ಕೊರೊನಾ ಸೋಂಕಿತರನ್ನು ಟೆಲಿ ಐಸಿಯು ಮೂಲಕ ಮೇಲ್ವಿಚಾರಣೆ ಮಾಡಬೇಕು. ಜಿಲ್ಲಾ ಮರಣ ಪರಿಶೋಧನೆ (ಡೆತ್ ಆಡಿಟ್) ಸಮಿತಿಯು ಕೋವಿಡ್ ಮರಣಗಳ ಪರಿಶೋಧನೆಯನ್ನು ನಿಯಮಿತವಾಗಿ ಮಾಡಬೇಕು. ರಾಜ್ಯ ಮರಣ ಪರಿಶೋಧನೆ ಸಮಿತಿಯು ಈ ಬಗ್ಗೆ ವರದಿ ತಯಾರಿಸಿ, ಆರೋಗ್ಯ ಇಲಾಖೆ ಆಯುಕ್ತಾಲಯಕ್ಕೆ ಸಲ್ಲಿಸಬೇಕು’ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT