ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಜುಲೈ 21ಕ್ಕೆ ಮುಂದೂಡಿಕೆ

Published 20 ಏಪ್ರಿಲ್ 2024, 14:19 IST
Last Updated 20 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಎಸ್‌ ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 7ರ ಬದಲು ಜುಲೈ 21ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.

ಪೂರ್ವಭಾವಿ ಪರೀಕ್ಷೆಯನ್ನು ಮೇ 5ರಂದು ನಡೆಸಲು ಮೊದಲು ತೀರ್ಮಾನಿಸಲಾಗಿತ್ತು. ಲೋಕಸಭೆ ಚುನಾವಣೆ ಘೋಷಣೆಯಾದ ಕಾರಣ ನಂತರ ಜುಲೈ 7ಕ್ಕೆ ‌ಮುಂದೂಡಲಾಗಿತ್ತು. ಆದರೆ, ಜುಲೈ 7ರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫ್‌ಒ ಪರೀಕ್ಷೆ ನಿಗದಿಯಾಗಿರುವುದರಿಂದ ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಹಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.

‘ಅಭ್ಯರ್ಥಿಗಳ ಮನವಿಯನ್ನು ಪರಿಗಣಿಸಿ ಪರೀಕ್ಷೆ ಮುಂದೂಡಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT