ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಅಕ್ರಮ ತಡೆ ಕಾರ್ಯಾಚರಣೆಯಲ್ಲಿ ದಾಖಲೆ

Published 6 ಮೇ 2024, 15:14 IST
Last Updated 6 ಮೇ 2024, 15:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ನಗದು, ಮದ್ಯ, ಮಾದಕವಸ್ತು, ಚಿನ್ನಾಭರಣ, ಉಚಿತ ಉಡುಗೊರೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಯಲು ನಡೆಸಿದ ಕಾರ್ಯಾಚರಣೆಯಲ್ಲಿ ₹452.98 ಕೋಟಿ ಮೌಲ್ಯದ ಸ್ವತ್ತುಗಳ ವಶದೊಂದಿಗೆ ದಾಖಲೆ ನಿರ್ಮಾಣವಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು ₹88 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚು ಮೊತ್ತದ ನಗದನ್ನೇ ವಶಕ್ಕೆ ಪಡೆಯಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವಶಪಡಿಸಿಕೊಂಡ ಸ್ವತ್ತುಗಳ ಮೊತ್ತ ₹384 ಕೋಟಿಯಷ್ಟಿತ್ತು. ಅದಕ್ಕೆ ಹೋಲಿಸಿದರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯದಲ್ಲಿ ₹68.98 ಕೋಟಿಯಷ್ಟು ಹೆಚ್ಚಳವಾಗಿದೆ.

ಮದ್ಯ ಮತ್ತು ಮಾದಕವಸ್ತುಗಳ ವಶದಲ್ಲಿ ಭಾರಿ ದಾಖಲೆ ನಿರ್ಮಾಣವಾಗಿದೆ. ಅಬಕಾರಿ ಕಾಯ್ದೆಯಡಿ 34,731 ಪ್ರಕರಣಗಳನ್ನು ದಾಖಲಿಸಲಾಗಿದೆ. ಘೋರ ಅಪರಾಧ ಕೃತ್ಯ ಎಸಗಿದ ಆರೋಪದ ಮೇಲೆ ಅಬಕಾರಿ ಕಾಯ್ದೆಯಡಿ 3,400 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮಾದಕವಸ್ತು ನಿಯಂತ್ರಣ ಕಾಯ್ದೆಯಡಿ 193 ಪ್ರಕರಣ ದಾಖಲಿಸಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ಈ ಬಾರಿ ಒಟ್ಟು ₹9.53 ಕೋಟಿ ಮೌಲ್ಯದ ಉಚಿತ ಉಡುಗೊರೆಗಳನ್ನು ವಶಕ್ಕೆ ಪಡೆಯಲಾಗಿದೆ. ನಗದೀಕರಿಸಿ ಚುನಾವಣಾ ಅಕ್ರಮಕ್ಕೆ ಬಳಸುವ ಶಂಕೆಯ ಮೇಲೆ ಗುಜರಿ ವಸ್ತುಗಳು, ಲೋಹಗಳ ದಾಸ್ತಾನನ್ನೂ ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT