ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ದೇಶದಿಂದ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.
ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ.
ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ.