ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ಅಲ್ಪ ಬರ ಪರಿಹಾರ: ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ

Published 28 ಏಪ್ರಿಲ್ 2024, 5:37 IST
Last Updated 28 ಏಪ್ರಿಲ್ 2024, 5:37 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಚಿವರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದರು.

ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ₹18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ₹ 3,498 ಕೋಟಿಗೆ ಅನುಮೋದನೆ ನೀಡಿ, ₹ 3,454 ಕೋಟಿ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನೆನಿರತರು ಆಗ್ರಹಿಸಿದರು.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ ₹ 35,162 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ₹ 18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ₹ 3,454 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT