ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಸಾಧ್ಯತೆ: ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

Published 23 ಏಪ್ರಿಲ್ 2024, 15:32 IST
Last Updated 23 ಏಪ್ರಿಲ್ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೆಲವೆಡೆ ಬುಧವಾರವೂ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ (30-40 ಕಿ.ಮೀ. ವೇಗ) ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಕೆಲ ಜಿಲ್ಲೆಗಳಲ್ಲಿ ಮಳೆಯ ಜತೆಗೆ ಬಿಸಿಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ. ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಂಭವವಿದೆ ಎಂದು ಹೇಳಿದೆ. 

24 ರಿಂದ 27ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳು ರಾಜ್ಯದಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಮಂಗಳವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ರಾಯಚೂರಿನಲ್ಲಿ ಗರಿಷ್ಠ (44.2 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ. ಕಲಬುರಗಿ, ಯಾದಗಿರಿ ಸೇರಿ 14 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT