ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಪುಟಿನ್ ಪ್ರಮಾಣ ವಚನ ಸ್ವೀಕಾರ

Published 7 ಮೇ 2024, 12:38 IST
Last Updated 7 ಮೇ 2024, 12:38 IST
ಅಕ್ಷರ ಗಾತ್ರ

ಮಾಸ್ಕೋ: ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಇಂದು (ಮಂಗಳವಾರ) ಪ್ರಮಾಣ ವಚನ ಸ್ವೀಕರಿಸಿದರು.

ಕ್ರೆಮ್ಲಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪುಟಿನ್ ಮುಂದಿನ 6 ವರ್ಷಗಳ ಅವಧಿಗೆ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 1999ರಿಂದ ಪುಟಿನ್‌ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‌

ಉಕ್ರೇನ್‌–ರಷ್ಯಾ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಹಾಗೂ ಇತರ ಹಲವು ಪಾಶ್ಚಿಮಾತ್ಯ ದೇಶಗಳು ಕ್ರೆಮ್ಲಿನ್‌ ಸಮಾರಂಭವನ್ನು ಬಹಿಷ್ಕರಿಸಿದ್ದವು.

'ನಾವು ಈ ಸಮಾರಂಭಕ್ಕೆ ಪ್ರತಿನಿಧಿಯನ್ನು ಕಳುಹಿಸುವುದಿಲ್ಲ' ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ಹೇಳಿದ್ದರು.

ಇನ್ನು ಬ್ರಿಟನ್, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ರಾಷ್ಟ್ರಗಳು ಪ್ರಮಾಣವಚನ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿದ್ದವು. ಆದರೆ ಫ್ರಾನ್ಸ್ ತನ್ನ ರಾಯಭಾರಿಯನ್ನು ಕಳುಹಿಸುವುದಾಗಿ ಹೇಳಿತ್ತು.

ಕಳೆದ ಮಾರ್ಚ್ 15ರಿಂದ 17ರವರೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಪುಟಿನ್ ಗೆಲುವು ಸಾಧಿಸಿದ್ದರು. ಚಲಾವಣೆಗೊಂಡ ಒಟ್ಟು ಮತಗಳಲ್ಲಿ ಪುಟಿನ್ ಶೇ 87.34 ರಷ್ಟು ಮತಗಳನ್ನು ಪಡೆದ್ದಿದ್ದರು. ‌‌‌‌‌‌‌‌‌‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT