ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರುಪಯುಕ್ತ ಸರ್ವಿಸ್ ರಸ್ತೆಗಳು

Last Updated 8 ಜುಲೈ 2013, 19:59 IST
ಅಕ್ಷರ ಗಾತ್ರ

ರಿಂಗ್ ರಸ್ತೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಸಲುವಾಗಿ ನಗರದ ಹಲವು ಭಾಗಗಳಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡಿ ಅಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸರ್ವಿಸ್ ರಸ್ತೆಗಳನ್ನು ಮರಳು, ಕಲ್ಲಿನ ಲಾರಿಗಳು, ಶಾಲಾ ವಾಹನಗಳು, ಕಾರ್ಖಾನೆ ಬಸ್ಸುಗಳು, ಟ್ಯಾಕ್ಸಿಗಳು, ರಿಪೇರಿ ವಾಹನಗಳು ಆಕ್ರಮಿಸಿಕೊಂಡಿರುವುದರಿಂದ ಅಲ್ಲಿ ಬೇರೆ ವಾಹನಗಳ ಸಂಚಾರ ಕಷ್ಟವಾಗಿದೆ.

ಇದರಿಂದ ಸರ್ವಿಸ್ ರಸ್ತೆಗಳ ನಿರ್ಮಾಣದ ಮೂಲ ಉದ್ದೇಶಕ್ಕೆ ಭಂಗ ಬಂದಂತಾಗಿದೆ.

ಕೊನೆಯ ಪಕ್ಷ ಟ್ರಾಫಿಕ್ ಪೊಲೀಸ್‌ನವರಾಗಲೀ ಟೈಗರ್ ವಾಹನದವರಾಗಲೀ ಅಂಥ ವಾಹನ ಚಾಲಕರಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿ ಸರ್ವಿಸ್ ರಸ್ತೆಗಳನ್ನು ವಾಹನಗಳ ಸುಗಮ ಸಂಚಾರಕ್ಕೆ ಮುಕ್ತವಾಗಿಸಬೇಕಾಗಿ ವಿನಂತಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT