ನವದೆಹಲಿ: ಶನಿವಾರದ ಐಪಿಎಲ್ ಟೂರ್ನಿಯಲ್ಲಿ ಮುಂಬೈ ವಿರುದ್ಧ ಡೆಲ್ಲಿ 10 ರನ್ಗಳ ಜಯ ಸಾಧಿಸಿತು.
ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹಾಗೂ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮುಖಾಮುಖಿಯಾಗಿದ್ದವು.
ಈ ಪಂದ್ಯ ದೆಹಲಿಯಲ್ಲಿ ನಡೆಯುತ್ತಿದ್ದು ಮೊದಲು ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ದೆಹಲಿ ತಂಡ ಮೊದಲು ಬ್ಯಾಟ್ ಮಾಡಿತು.
ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ದೆಹಲಿ 257 ರನ್ ಪೇರಿಸಿದೆ. ಗುರ್ಕ್ 84, ಸ್ಟಬ್ಸ್ 48, ಹೋಪ್ 41 ರನ್ ಹೊಡೆದು ಗಮನ ಸೆಳೆದರು.
ಮುಂಬೈ ಪರ ಬೂಮ್ರಾ, ವುಡ್, ಚಾವ್ಲಾ, ನಬಿ ತಲಾ 1 ವಿಕೆಟ್ ಪಡೆದರು.
ಮುಂಬೈ ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 247 ರನ್ಗಳಿಸಲು ಮಾತ್ರ ಸಾಧ್ಯವಾಯಿತು. ಈ ಮೂಲಕ ಮುಂಬೈ ತಂಡ 10 ರನ್ಗಳ ಸೋಲು ಅನುಭವಿಸಿತು.