ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮಹಾ' ಸರ್ಕಾರ ಬಿಕ್ಕಟ್ಟು| ವಿರೋಧ ಪಕ್ಷದಲ್ಲಿ ಕೂರುವುದೇ ಸದ್ಯದ ತೀರ್ಮಾನ–ಖರ್ಗೆ

Last Updated 11 ನವೆಂಬರ್ 2019, 2:43 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಮಾತನಾಡಿರುವ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ತೀರ್ಮಾನದಂತೆ ನಡೆದುಕೊಳ್ಳಲಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ.

ಮುಂಬೈಗೆ ತೆರಳಿರುವ ಅವರುಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್‌ ಸಭೆ ನಡೆಯಲಿದೆ. ಈ ಸಭೆಯಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ಚರ್ಚಿಸಲಾಗುವುದು ಹಾಗೂ ಹೈಕಮಾಂಡ್‌ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು ಎಂದು ಹೇಳಿದ್ದಾರೆ.

ಜನರು ನೀಡಿದ ತೀರ್ಪಿನಂತೆ ಹಾಗೂ ನಮ್ಮ ಹೈಕಮಾಂಡ್‌ ನಿರ್ಧಾರದಂತೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದೇ ನಮ್ಮ ಸದ್ಯದ ತೀರ್ಮಾನ ಎಂದು ಖರ್ಗೆ ಹೇಳಿದ್ದಾರೆ.

ಬಿಜೆಪಿ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಹೇಳಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದಿರಿವೆ. ಶಿವಸೇನಾವು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂಬ ಮಾತುಗಳು ಕೇಳಿಬಂದಿವೆ. ಈಗಾಗಲೇ ರಾಜ್ಯಪಾಲರು ಸರ್ಕಾರ ರಚನೆಗೆ ಶಿವಸೇನಾ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT