ನವದೆಹಲಿ: ‘ನಾನು ಪ್ರಧಾನಿ ಹುದ್ದೆಗಾಗಿ ಹಕ್ಕು ಸ್ಥಾಪಿಸಿಲ್ಲ ಅಥವಾ ಆ ಸ್ಥಾನಕ್ಕೇರುವ ಅಪೇಕ್ಷೆಯನ್ನೂ ಹೊಂದಿಲ್ಲ’ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಹೇಳಿದ್ದಾರೆ.
ಸಿಪಿಎಂ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನು ಭೇಟಿ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವಿರೋಧ ಪಕ್ಷಗಳನ್ನು ಒಳಗೊಂಡ ಮೈತ್ರಿಕೂಟದ ನಾಯಕತ್ವದ ಮೇಲೆ ಕಣ್ಣಿಟ್ಟಿರುವ ನಿತೀಶ್‌ಕುಮಾರ್, ಇದೇ ಕಾರಣಕ್ಕಾಗಿ ನವದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಅವರ ಹೇಳಿಕೆಗೆ ಮಹತ್ವ ಬಂದಿದೆ.
‘ಎಡಪಕ್ಷಗಳು, ಕಾಂಗ್ರೆಸ್ ಹಾಗೂ ಎಲ್ಲ ಪ್ರಾದೇಶಿಕ ಪಕ್ಷಗಳು ಒಂದಾಗಿ ಮೈತ್ರಿಕೂಟ ರಚಿಸುವ ಸಮಯ ಬಂದಿದೆ’ ಎಂದು ನಿತೀಶ್ ಕುಮಾರ್ ಹೇಳಿದರು.
‘ಯೌವನದ ದಿನಗಳಿಂದಲೂ ಸಿಪಿಎಂನೊಂದಿಗೆ ನಾನು ಸಂಪರ್ಕ ಹೊಂದಿದ್ದೇವೆ. ನಾನು ದೆಹಲಿಗೆ ಬಂದಾಗಲೆಲ್ಲಾ ಸಿಪಿಎಂ ಕಚೇರಿಗೆ ಭೇಟಿ ನೀಡುತ್ತೇನೆ. ನೀವು ನನ್ನನ್ನು ನೋಡಿಲ್ಲ ಅಷ್ಟೆ’ ಎಂದು ಸುದ್ದಿಗಾರರನ್ನು ಉದ್ದೇಶಿಸಿ ಹೇಳಿದರು.
‘ನಿತೀಶ್‌ಕುಮಾರ್ ಅವರು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಲು ನಿರ್ಧರಿಸಿರುವುದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧದ ಹೋರಾಟಕ್ಕೆ ಬಲ ಬಂದಂತಾಗಿದೆ’ ಎಂದು ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಪ್ರತಿಕ್ರಿಯಿಸಿದರು.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.