ಪ್ರತಿ ವರ್ಷ ಏಪ್ರಿಲ್ 18 ರಂದು ವಿಶ್ವ ಪಾರಂಪರಿಕ ತಾಣಗಳು ಮತ್ತು ಸ್ಮಾರಕಗಳ ದಿನವಾಗಿ ಆಚರಣೆ ಮಾಡಲಾಗುತ್ತದೆ. ಇದಕ್ಕೆ ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಯುನೆಸ್ಕೋ ಮಾನ್ಯತೆ ನೀಡಿದೆ.
ಪಾರಂಪರಿಕ ತಾಣಗಳು, ಸ್ಮಾರಕಗಳ ಇತಿಹಾಸ, ವೈವಿಧ್ಯತೆ ಅವುಗಳನ್ನು ರಕ್ಷಣೆ ಮಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವ ಪರಂಪರೆ ದಿನಆಚರಣೆ ಮಾಡಲಾಗುತ್ತದೆ.
ಈ ವಿಶೇಷ ದಿನವನ್ನು ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ನಮ್ಮ ಪುರಾತನತಾಣಗಳು ಮತ್ತು ಸ್ಮಾರಕಗಳ ಬಗ್ಗೆ ಯುವ ಪೀಳಿಗೆಗೆ ಮಹತ್ವದ ಸಂದೇಶತಿಳಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.
ವಿಶ್ವವ್ಯಾಪಿಯಾಗಿ ಪುರಾತತ್ತ್ವ ಶಾಸ್ತ್ರಜ್ಞರು, ಇತಿಹಾಸಕಾರರು, ವಾಸ್ತುಶಿಲ್ಪಿಗಳು, ಎಂಜಿನಿಯರ್‌ಗಳು ಹಾಗೂ ಕಲಾವಿದರು ಸೇರಿದಂತೆ ಪರಾಂಪರಿಕ ತಾಣಗಳು, ಸ್ಮಾರಕಗಳನ್ನು ಸಂರಕ್ಷಿಸಲು ಕೊಡುಗೆ ನೀಡುವ ಎಲ್ಲಾ ಜನರ ಪ್ರಯತ್ನಗಳನ್ನು ಈ ದಿನದಂದು ಗುರುತಿಸಲಾಗುತ್ತದೆ.
ಪ್ರತಿ ವರ್ಷ ಬೇರೆ ಬೇರೆ ಥೀಮ್‌ನಲ್ಲಿ ಪಾರಂಪರಿಕ ದಿನಆಚರಣೆ ಮಾಡಲಾಗುತ್ತದೆ. ಸಂಸ್ಕೃತಿ, ಪರಂಪರೆ, ಜವಾಬ್ದಾರಿ ಹಂಚಿಕೊಳ್ಳಿ ಎಂಬ ಧೀಮ್ ಅಡಿಯಲ್ಲಿ ಈ ವರ್ಷ ಪರಾಂಪರಿಕ ದಿನ ಆಚರಣೆ ಮಾಡಲಾಗುತ್ತಿದೆ.
ಯುನೆಸ್ಕೋ 1983ರ ಏಪ್ರಿಲ್ 18ರಿಂದ ಈ ದಿನವನ್ನು ಅಧಿಕೃತವಾಗಿ ಆಚರಣೆ ಮಾಡಲಾಗುತ್ತದೆ. ನಮ್ಮ ಪೂರ್ವಜರು ನಮಗಾಗಿ ಹಲವಾರು ಸ್ಮಾರಕ ಮತ್ತು ಐತಿಹಾಸಿಕ ತಾಣಗಳನ್ನು ಬಿಟ್ಟುಹೋಗಿದ್ದಾರೆ. ಅವುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.