ನವದೆಹಲಿ: ಐಷಾರಾಮಿ ಕಾರು ತಯಾರಿಸುವ ಬಿಎಂಡಬ್ಲ್ಯು ಗ್ರೂಪ್ ಇಂಡಿಯಾ, ದೇಶದ ಮಾರುಕಟ್ಟೆಗೆ ಎಂ4 ಕಾಂಪಿಟಿಷನ್ ಕೂಪೆ ಬಿಡುಗಡೆ ಮಾಡಿದೆ. ಇದರ ಎಕ್ಸ್ ಷೋರೂಂ ಬೆಲೆಯು ₹ 1.43 ಕೋಟಿ ಇದೆ.
ಇದು 3 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ನಿಂತ ಸ್ಥಿತಿಯಿಂದ 3.5 ಸೆಕೆಂಡ್‌ಗಳಲ್ಲಿ ಗಂಟೆಗೆ 100 ಕಿಲೋ ಮೀಟರ್ ವೇಗವನ್ನು ತಲುಪುವ ಸಾಮರ್ಥ್ಯ ಹೊಂದಿದೆ ಎಂದು ಕಂಪನಿಯು ತಿಳಿಸಿದೆ.
ಹೊಸ ಬಿಎಂಡಬ್ಲ್ಯು ಎಂ4, ವಿಶಿಷ್ಟ ಸಂಯೋಜನೆಗಳೊಂದಿಗೆ ಟ್ರ್ಯಾಕ್ ಮತ್ತು ಸ್ಟ್ರೀಟ್‌ನಲ್ಲಿ ರಾಜಿಯಾಗದ ಅನುಭವವನ್ನು ನೀಡುತ್ತದೆ ಎಂದು ಬಿಎಂಡಬ್ಲ್ಯು ಗ್ರೂಪ್ ಇಂಡಿಯಾದ ಅಧ್ಯಕ್ಷ ವಿಕ್ರಂ ಪವ್ಹಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.