ನವದೆಹಲಿ: ಮುಂದಿನ ವರ್ಷದ ಮಾರ್ಚ್ ವೇಳೆಗೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸಲು ಚೆನ್ನೈ ಮೂಲದ ಸ್ಟಾರ್ಟ್‌ಅಪ್ (ನವೋದ್ಯಮ) ಇಪ್ಲೇನ್ ಕಂಪನಿ ನಿರ್ಧರಿಸಿದೆ.
ನಗರ ಪ್ರದೇಶದಲ್ಲಿನ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದೆ.
‘ಎಲೆಕ್ಟ್ರಿಕ್ ವರ್ಟಿಕಲ್ ಟೇಕ್‌ಆಫ್ ಮತ್ತು ಲ್ಯಾಂಡಿಂಗ್ (ಇವಿಟಿಒಎಲ್) ಏರ್‌ಕ್ರಾಫ್ಟ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮೂರು ಅಥವಾ ನಾಲ್ಕು ಆಸನ ಸಾಮರ್ಥ್ಯವಿರುವ ಏರ್ ಆಂಬುಲೆನ್ಸ್ ಆಗಿಯೂ ಇದನ್ನು ಮಾರ್ಪಡಿಸಬಹುದಾಗಿದೆ’ ಎಂದು ಕಂಪನಿಯ ಸಂಸ್ಥಾಪಕ ಮತ್ತು ಸಿಇಒ ಸತ್ಯ ಚಕ್ರವರ್ತಿ ತಿಳಿಸಿದ್ದಾರೆ.
ಮುಂದಿನ ವರ್ಷದ ಮಾರ್ಚ್ ವೇಳೆಗೆ ಏರ್‌ಕ್ರಾಫ್ಟ್‌ನ ಮೂಲ ಮಾದರಿ ಸಿದ್ಧವಾಗಲಿದೆ. ಬಳಿಕ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ (ಡಿಜಿಸಿಎ) ಪ್ರಮಾಣೀಕರಣ ಕೋರಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಕಂಪನಿಯ ವೆಬ್‌ಸೈಟ್‌ನ ಮಾಹಿತಿ ಪ್ರಕಾರ, ಜನರು ಸ್ವಂತ ವಾಹನದಲ್ಲಿ 60 ನಿಮಿಷದಲ್ಲಿ ಕ್ರಮಿಸಬಹುದಾದ ದೂರವನ್ನು ಏರ್‌ಕ್ರಾಫ್ಟ್ ಮೂಲಕ 14 ನಿಮಿಷದಲ್ಲಿ ತಲುಪಬಹುದಾಗಿದೆ. ಅಲ್ಲದೆ, ಕಂಪನಿಯು ಡ್ರೋನ್‌ಗಳನ್ನು ಅಭಿವೃದ್ಧಿಪಡಿಸಿದ್ದು, ಮುಂದಿನ ತಿಂಗಳಿನಿಂದ ಮಾರಾಟ ಆರಂಭವಾಗುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.