ADVERTISEMENT

HSRP ನಂಬರ್ ಪ್ಲೇಟ್ ಗಡುವು ಸೆಪ್ಟೆಂಬರ್ 15ರವರೆಗೆ ವಿಸ್ತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2024, 6:41 IST
Last Updated 20 ಜೂನ್ 2024, 6:41 IST
<div class="paragraphs"><p>&nbsp;ಎಚ್‌ಎಸ್ಆರ್‌ಪಿ</p></div>

 ಎಚ್‌ಎಸ್ಆರ್‌ಪಿ

   

(ಐಸ್ಟೋಕ್ ಚಿತ್ರ)

ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಆಳವಡಿಸುವ ಅವಧಿಯನ್ನು ರಾಜ್ಯ ಸರ್ಕಾರವು ಸೆಪ್ಟೆಂಬರ್ 15, 2024ರವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.

ADVERTISEMENT

ವಾಹನ ಮಾಲೀಕರಿಂದ ಸೂಕ್ತ ಸ್ಪಂದನೆ ದೊರಕದಿರುವ ಹಿನ್ನೆಲೆಯಲ್ಲಿ ಹಳೆಯ ವಾಹನಗಳಿಗೆ ಎಚ್‌ಎಸ್ಆರ್‌ಪಿ ಆಳವಡಿಸುವ ಅವಧಿಯನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ.

2019ರ ಏಪ್ರಿಲ್ ನಂತರದ ವಾಹನಗಳ ನೋಂದಣಿ ಮಾಡಿಕೊಳ್ಳುವಾಗಲೇ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿರುತ್ತದೆ. ಅದಕ್ಕಿಂತ ಹಿಂದೆ ನೋಂದಣಿಯಾಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಆಳವಡಿಸಬೇಕಿದೆ.

ಈ ಹಿಂದೆಯೂ ಗಡುವು ಹಲವು ಬಾರಿ ವಿಸ್ತರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.