ನವದೆಹಲಿ: ತನ್ನ ಎಲ್ಲ ಮಾದರಿಯ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಭಾರತದ ಅತಿದೊಡ್ಡ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ಬುಧವಾರ ಹೇಳಿದೆ.
ಆಂತರಿಕಉತ್ಪಾದನಾ ವೆಚ್ಚ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕಂಪನಿ ಹೇಳಿದೆ.
ಏಪ್ರಿಲ್‌ನಲ್ಲಿ ಕಾರುಗಳ ಎಲ್ಲ ಮಾದರಿಗಳ ಬೆಲೆ ಹೆಚ್ಚಳ ಮಾಡಲಾಗುತ್ತದೆ. ಎಲ್ಲ ಮಾದರಿಗಳ ಬೆಲೆ ಹೆಚ್ಚಳ ಭಿನ್ನವಾಗಿರುತ್ತದೆ ಎಂದು ಕಂಪನಿ ತನ್ನ ರೆಗ್ಯುಲೇಟರಿ ಫೈಲಿಂಗ್‌ನಲ್ಲಿ ತಿಳಿಸಿದೆ.
ಕಳೆದ ತ್ರೈಮಾಸಿಕದಲ್ಲೂ ಕೂಡ ಮಾರುತಿ ಸುಜುಕಿ ಬೆಲೆ ಹೆಚ್ಚಳ ಮಾಡಿತ್ತು. ದೇಶಿ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಕಾರುಗಳ ಮಾರಾಟ ಪ್ರಭಾವಶಾಲಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.