ನವದೆಹಲಿ: ವಿದ್ಯುತ್‌ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ಎಲೆಕ್ಟ್ರಿಕ್, 500 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿದೆ.
ಕಂಪನಿಯಲ್ಲಿ ಅಗತ್ಯಕ್ಕಿಂತ ಹೆಚ್ಚಿರುವ ಉದ್ಯೋಗದ ಕಡಿತಕ್ಕೆ ಕ್ರಮವಹಿಸಲಾಗಿದೆ. ಜುಲೈನಿಂದಲೇ ಈ ಪ್ರಕ್ರಿಯೆ ಆರಂಭವಾಗಿದ್ದು, ಈ ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಕಂಪನಿಯ ಇ–ಸ್ಕೂಟರ್‌ಗಳ ಮಾರಾಟ ಕಡಿಮೆಯಾಗಿದೆ. ಇದರಿಂದ ಲಾಭದ ಪ್ರಮಾಣವು ತಗ್ಗಿದೆ. ವೆಚ್ಚ ಸರಿದೂಗಿಸುವ ಉದ್ದೇಶಕ್ಕೆ ಕಂಪನಿಯ ಎಲ್ಲಾ ಹಂತದಲ್ಲಿ ಇರುವ ಹೆಚ್ಚುವರಿ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ ಎಂದು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.