ನವದೆಹಲಿ: ಟೊಯೋಟ ಕಿರ್ಲೋಸ್ಕರ್ ಮೋಟರ್ ಕಂಪನಿಯು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ತನ್ನೆಲ್ಲಾ ಮಾದರಿಗಳ ಬೆಲೆಯನ್ನು ಶೇ 4ರವರೆಗೆ ಹೆಚ್ಚಿಸುವುದಾಗಿ ಶನಿವಾರ ತಿಳಿಸಿದೆ.
ಕಚ್ಚಾ ಸಾಮಗ್ರಿಗಳು ಸೇರಿದಂತೆ ತಯಾರಿಕಾ ವೆಚ್ಚದಲ್ಲಿ ಏರಿಕೆ ಆಗಿರುವುದರಿಂದ ವಾಹನಗಳ ಬೆಲೆ ಹೆಚ್ಚಳದ ನಿರ್ಧಾರಕ್ಕೆ ಬರಲಾಗಿದೆ. ಗ್ರಾಹಕರ ಮೇಲೆ ಹೆಚ್ಚುತ್ತಿರುವ ವೆಚ್ಚವನ್ನು ಕಡಿಮೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ನಡೆಸಲಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಬಿಎಂಡಬ್ಲ್ಯು, ಔಡಿ ಮತ್ತು ಮರ್ಸಿಡಿಸ್ ಬೆಂಜ್ ಕಂಪನಿಗಳು ಸಹ ಏಪ್ರಿಲ್ 1 ರಿಂದ ಬೆಲೆ ಏರಿಕೆ ಮಾಡುವುದಾಗಿ ಈಗಾಗಲೇ ಘೋಷಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.