ಮುಂಬೈ: ಜಾಗತಿಕ ಮಟ್ಟದ ರೇಟಿಂಗ್ ಏಜೆನ್ಸಿ ‘ಮೂಡೀಸ್’ ಭಾರತದ ದೇಶೀಯ ಮತ್ತು ಅಂತರರಾಷ್ಟ್ರೀಯ ಹಣಕಾಸು ಸ್ಥಿತಿಗತಿಯ ರೇಟಿಂಗ್ ಅನ್ನು ಉನ್ನತೀಕರಿಸಿದ್ದು ಭಾರತಕ್ಕೆ ‘ಬಿಎಎ2’ ರೇಟಿಂಗ್ ನೀಡಿದೆ.
‘ಮೂಡೀಸ್’ 13 ವರ್ಷಗಳ ಬಳಿಕ ಭಾರತದ ರೇಟಿಂಗ್ ಉನ್ನತೀಕರಿಸಿದೆ. 2004ರಲ್ಲಿ ‘ಮೂಡೀಸ್’ ಭಾರತಕ್ಕೆ ‘ಬಿಎಎ3’ ರೇಟಿಂಗ್ ನೀಡಿತ್ತು.
‘ನೋಟು ರದ್ಧತಿ, ಜಿಎಸ್‌ಟಿ ಜಾರಿ, ಬ್ಯಾಂಕ್ ಖಾತೆಗಳಿಗೆ ಹಾಗೂ ಸರ್ಕಾರದ ಸೌಲಭ್ಯಗಳಿಗೆ ಆಧಾರ್ ಜೋಡಣೆಯಂಥ ಸರ್ಕಾರದ ಕ್ರಮಗಳು ಭಾರತದ ಆರ್ಥಿಕ ಅಭಿವೃದ್ಧಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿವೆ’ ಎಂದು ‘ಮೂಡೀಸ್’ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.