ಬೆಂಗಳೂರು: ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಲಿಥಿಯಂ ಅಯಾನ್ ಬ್ಯಾಟರಿ ತಂತ್ರಜ್ಞಾನವನ್ನು ಹಸ್ತಾಂತರಿಸಲು ಇಸ್ರೊ ಮುಂದಾಗಿದೆ.
ಬಾಹ್ಯಾಕಾಶ ಉದ್ದೇಶಕ್ಕಾಗಿ ಲಿಥಿಯಂ ಅಯಾನ್ ಬ್ಯಾಟರಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆ ಮತ್ತು ಬೇಡಿಕೆ ಹೆಚ್ಚುತ್ತಿರುವುದರಿಂದ ಬ್ಯಾಟರಿ ತಯಾರಿಕ ಉದ್ಯಮ ಅಥವಾ ನವೋದ್ಯಮಗಳಿಗೆ ತಂತ್ರಜ್ಞಾನವನ್ನು ಹಸ್ತಾಂತರಿಸಲು ಸಿದ್ಧವಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ದೇಶದಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸುವ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಈ ನಿಟ್ಟಿನಲ್ಲಿ ಲಿಥಿಯಂ ಬ್ಯಾಟರಿ ಬಳಕೆ ಬಹು ಮುಖ್ಯ ಪಾತ್ರವಹಿಸಲಿದೆ. ಸದ್ಯಕ್ಕೆ ವಿದೇಶಿ ನಿರ್ಮಿತ ಲಿಥಿಯಂ ಬ್ಯಾಟರಿಗಳ ಬಳಕೆ ಹೆಚ್ಚಿನ ಪ್ರಮಾಣದಲ್ಲಿದೆ.
ಆಸಕ್ತ, ಉದ್ಯಮಗಳು ವಿಎಸ್‌ಎಸ್‌ಸಿ, ಇಸ್ರೊ, ನೀತಿ ಆಯೋಗದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪಡೆಯಬಹುದು ಎಂದು ಇಸ್ರೊ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.