ADVERTISEMENT

ಕರ್ನಾಟಕದ 300 ಎಕರೆ ಪ್ರದೇಶದಲ್ಲಿ ಐಫೋನ್‌ ತಯಾರಿಕ ಘಟಕ: 1 ಲಕ್ಷ ಉದ್ಯೋಗ ಸೃಷ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಮಾರ್ಚ್ 2023, 11:43 IST
Last Updated 3 ಮಾರ್ಚ್ 2023, 11:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕದಲ್ಲಿ 300 ಎಕರೆ ಪ್ರದೇಶದಲ್ಲಿ ‘ಫಾಕ್ಸ್‌ಕಾನ್’ ಐಫೋನ್‌ ತಯಾರಕ ಘಟಕ ಸ್ಥಾಪನೆಯಾಗಲಿದ್ದು, 1 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಜೀವ್, ‘ಫಾಕ್ಸ್‌ಕಾನ್‌ ಕಂಪನಿಗೆ ಬೆಂಗಳೂರಿನ ಹೊರವಲಯದಲ್ಲಿ ಭೂಮಿಯನ್ನು ಒದಗಿಸಲಾಗಿದೆ. ಆ್ಯಪಲ್ ಫೋನ್‌ಗಳ ಅತಿದೊಡ್ಡ ಉತ್ಪಾದನಾ ಘಟಕಗಳಲ್ಲಿ ಒಂದಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಸಿಎಂ ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರದ ಸಾಧನೆ ಇದಾಗಿದೆ’ ಎಂದು ಬರೆದುಕೊಂಡಿದ್ದಾರೆ.

‘ರಾಜ್ಯದಲ್ಲಿ ಶೀಘ್ರದಲ್ಲೇ ಆ್ಯಪಲ್ ಫೋನ್‌ಗಳನ್ನು ತಯಾರಿಸಲಾಗುವುದು. ಇದರಿಂದಾಗಿ ಸುಮಾರು 1 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವವೇ ಸಾಕ್ಷಿ. 2025ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ರಾಷ್ಟ್ರವನ್ನಾಗಿಸಲು ನಾವೆಲ್ಲರೂ ಶ್ರಮಿಸೋಣ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.