ನವದೆಹಲಿ: ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳ ಸುಧಾರಣೆಗೆ ‘ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ’ವನ್ನು ಪ್ರಾರಂಭಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದರು.
2022-23 ರ ಬಜೆಟ್ ಮಂಡಿಸಿ, ಸಾಂಕ್ರಾಮಿಕ ರೋಗವು ಎಲ್ಲಾ ವಯಸ್ಸಿನ ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸಿದೆ. ಆದ್ದರಿಂದ ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳ ಸುಧಾರಣೆಗೆ ಈ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದರು.
‘ಕಾರ್ಯಕ್ರಮವು 23 ಟೆಲಿ-ಮೆಂಟಲ್ ಹೆಲ್ತ್ ಸೆಂಟರ್ ಆಫ್ ಎಕ್ಸಲೆನ್ಸ್‌ನ ನೆಟ್‌ವರ್ಕ್ ಅನ್ನು ಒಳಗೊಂಡಿರುತ್ತದೆ. ನಿಮ್ಹಾನ್ಸ್ ನೋಡಲ್ ಕೇಂದ್ರವಾಗಿದೆ. ಬೆಂಗಳೂರಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯು (ಐಐಐಟಿ–ಬಿ) ತಂತ್ರಜ್ಞಾನ ಒದಗಿಸಲಿದೆ ಎಂದು ಹೇಳಿದರು.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್: ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಗಾಗಿ ಮುಕ್ತ ವೇದಿಕೆ ತರಲಾಗುವುದು. ಇದು ಆರೋಗ್ಯ ಪೂರೈಕೆದಾರರು ಮತ್ತು ಆರೋಗ್ಯದ ಡಿಜಿಟಲ್ ನೋಂದಣಿಗಳನ್ನು ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು.
ಬಜೆಟ್ ಕುರಿತ ಸಮಗ್ರ ಅಪ್‌ಡೇಟ್‌ಗೆ ಕ್ಲಿಕ್ ಮಾಡಿ:ಬಜೆಟ್ 2022
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.