ADVERTISEMENT

Budget 2024: ಆದಾಯ ತೆರಿಗೆ ಮಿತಿಯಲ್ಲಿ ಯಥಾಸ್ಥಿತಿ

ಪಿಟಿಐ
Published 1 ಫೆಬ್ರುವರಿ 2024, 7:03 IST
Last Updated 1 ಫೆಬ್ರುವರಿ 2024, 7:03 IST
<div class="paragraphs"><p>ನಿರ್ಮಲಾ ಸೀತಾರಾಮನ್</p></div>

ನಿರ್ಮಲಾ ಸೀತಾರಾಮನ್

   

(ಪಿಟಿಐ ಚಿತ್ರ)

ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮಂಡನೆಯಾದ ಕೇಂದ್ರದ ಮಧ್ಯಂತರ ಬಜೆಟ್‌ನಲ್ಲಿ ಆದಾಯ ತೆರಿಗೆ ಮಿತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. 

ADVERTISEMENT

ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯಡಿ ಯಾವುದೇ ಬದಲಾವಣೆ ಮಾಡಿಲ್ಲ. ನೇರ ಮತ್ತು ಪರೋಕ್ಷ ತೆರಿಗೆಯಡಿಯೂ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. 

‘ಆಮದು ಸುಂಕ ಸೇರಿದಂತೆ ತೆರಿಗೆ ಮಿತಿಯಲ್ಲಿ ಬದಲಾವಣೆ ಮಾಡಿಲ್ಲ. ಆದರೆ, ನವೋದ್ಯಮಗಳಿಗೆ ಉತ್ತೇಜನ ನೀಡಲು ಒತ್ತು ನೀಡಲಾಗಿದೆ’ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ವಿವಾದಿತ ನೇರ ತೆರಿಗೆ ಬೇಡಿಕೆಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇದರಿಂದ 1 ಕೋಟಿ ತೆರಿಗೆದಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.‌

2009-10ನೇ ಸಾಲಿಗೆ ಪಾವತಿದಾರರ ವಿವಾದಗಳಿಗೆ ಸಂಬಂಧಿಸಿದಂತೆ ₹25 ಸಾವಿರಕ್ಕಿಂತ ಕಡಿಮೆ ಮೊತ್ತಕ್ಕೆ ನೀಡಲಾದ ಪರಿಹಾರವನ್ನು ರದ್ದುಪಡಿಸಲಾಗಿದೆ. 2010-11ರಿಂದ 2014-15ರ ವರೆಗೆ ₹10 ಸಾವಿರಗಿಂತ ಕಡಿಮೆ ಮೊತ್ತಕ್ಕೆ ನೀಡಲಾದ ಪರಿಹಾರವನ್ನೂ ರದ್ದುಪಡಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.