ADVERTISEMENT

Budget 2024: ಬಜೆಟ್ ಭಾಷಣಕ್ಕೂ ಮುನ್ನ ರಾಷ್ಟ್ರಪತಿ ಭೇಟಿ ಮಾಡಿದ ವಿತ್ತ ಸಚಿವೆ

ಪಿಟಿಐ
Published 23 ಜುಲೈ 2024, 5:01 IST
Last Updated 23 ಜುಲೈ 2024, 5:01 IST
<div class="paragraphs"><p>ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ&nbsp;ನಿರ್ಮಲಾ ಸೀತಾರಾಮನ್</p></div>

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

   

(ಪಿಟಿಐ ಚಿತ್ರ)

ನವದೆಹಲಿ: 2024-25ರ ಪೂರ್ಣ ಬಜೆಟ್ ಮಂಡಿಸುವ ಮೊದಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.

ADVERTISEMENT

ಸಂಪ್ರದಾಯದ ಪ್ರಕಾರ, ಹಣಕಾಸು ಸಚಿವರು ಸಂಸತ್ತಿಗೆ ತೆರಳುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದರು.

ಕೇಂದ್ರ ಬಜೆಟ್ ಮಂಡಿಸಲು ಸಂಸತ್ತಿಗೆ ತೆರಳುವ ಮುನ್ನ ಸೀತಾರಾಮನ್ ಅವರಿಗೆ ಮುರ್ಮು ಅವರು 'ದಹಿ-ಚಿನಿ' (ಮೊಸರು-ಸಕ್ಕರೆ) ನೀಡಿದರು.

ಸಂಸತ್ತಿನಲ್ಲಿ ಬಜೆಟ್‌ ಮಂಡನೆಗೆ ಮೊದಲು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್ 2024-25ರ ಹಣಕಾಸು ವರ್ಷಕ್ಕೆ (ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ) ಬಜೆಟ್ ಅನ್ನು ಅನುಮೋದಿಸುತ್ತದೆ.

ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ನಿರೀಕ್ಷೆಗಳು ಹೆಚ್ಚಿವೆ. 2024ರ ಫೆಬ್ರುವರಿಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ ಸೇರಿ ನಿರ್ಮಲಾ ಅವರು ಈವರೆಗೆ 6 ಬಾರಿ ಬಜೆಟ್‌ ಮಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.