ನವದೆಹಲಿ: ಜವಳಿ ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ 7 ಜವಳಿ ಪಾರ್ಕ್‌ಗಳನ್ನು ಸ್ಥಾಪಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
‘ಗುಣಮಟ್ಟ ಹಾಗೂ ರಫ್ತು ವಿಷಯದಲ್ಲಿ ಜಾಗತಿಕವಾಗಿ ಸ್ಪರ್ಧಾತ್ಮಕವಾಗಿರುವಂತೆ ಈ ವಲಯವನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಅವರು ಹೇಳಿದರು.
‘ಉತ್ಪಾದನೆ ಆಧಾರಿತ ಪ್ರೋತ್ಸಾಹಧನ ನೀಡುವ (ಪಿಎಲ್‌ಐ) ಯೋಜನೆಯಡಿ ಜವಳಿ ಉದ್ಯಮ ಸ್ಥಾಪಿಸುವ ಜೊತೆಗೆ, ಈ ಕ್ಷೇತ್ರದಲ್ಲಿ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗುವುದು’ ಎಂದೂ ಹೇಳಿದರು.
ಜವಳಿ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಕೇಂದ್ರ ಸರ್ಕಾರ ‘ಮಿತ್ರಾ’ (ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಆ್ಯಂಡ್ ಅಪರೇಲ್) ಎಂಬ ಯೋಜನೆಯನ್ನು ಈಗಾಗಲೇ ಘೋಷಿಸಿದೆ. ಇದರಡಿ 1,000 ಎಕರೆ ಪ್ರದೇಶದಲ್ಲಿ ಎಲ್ಲ ಮೂಲಸೌಕರ್ಯಗಳನ್ನು ಹೊಂದಿರುವ ಜವಳಿ ಪಾರ್ಕ್, ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ಆ್ಯಂಡ್ ಡಿ) ಸೌಲಭ್ಯಗಳು ಇರಲಿವೆ.
‘ಮಿತ್ರಾ’ ಅಡಿ ಈಗಾಗಲೇ 59 ಜವಳಿ ಪಾರ್ಕ್ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಈ ಪೈಕಿ 22 ಪಾರ್ಕ್‌ಗಳ ನಿರ್ಮಾಣ ಪೂರ್ಣಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.