ADVERTISEMENT

ಸರ್ಕಾರದಿಂದ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 9:01 IST
Last Updated 5 ಮಾರ್ಚ್ 2020, 9:01 IST
   

ಬೆಂಗಳೂರು: ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.

ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಈ ನಿರ್ಧಾರ ಘೋಷಿಸಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಅದಕ್ಕಾಗಿಈ ವರ್ಷ₹20 ಕೋಟಿ ರೂ.ಗಳ ನೆರವು ನೀಡಲಾಗಿದೆ.

ADVERTISEMENT

ಇದೇ ವೇಳೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ100 ಅಡಿ ಎತ್ತರದ ಕೆಂಪೇಗೌಡರಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ₹66 ಕೋಟಿ. ರೂ ಮೀಸಲಿಡಲಾಗಿದೆ ಎಂದು ಸಿಎಂ ತಿಳಿಸಿದರು.

ಬಸವಕಲ್ಯಾಣದಲ್ಲಿ₹500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವಅನುಭವ ಮಂಟಪಕ್ಕೆ ಈ ಬಾರಿ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ನೀಡಲಾಗಿದೆ.

ಸಂತ ಶಿಶುನಾಳ ಶರೀಫರ ಸಮಾಧಿ ಇರುವ ಹಾವೇರಿಯ ಶಿಶುನಾಳ ಗ್ರಾಮದಲ್ಲಿ ಐದು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಸಿಎಂ ಘೋಷಿಸಿದ್ಧಾರೆ.

ಮಾಜಿ ಮುಖ್ಯಮಂತ್ರಿ ದಿ. ಎಸ್‌. ನಿಜಲಿಂಗಪ್ಪ ಅವರು ವಾಸವಿದ್ದ ಚಿತ್ರದುರ್ಗದ ಮನೆಯನ್ನು ಸಂರಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ಐದು ಕೋಟಿ, ಸಾಹಿತಿ ಎಸ್‌.ಎಲ್‌ ಬೈರಪ್ಪ ಅವರ ಹುಟ್ಟೂರು ಹಾಸನದ ಸಂತೆಶಿವರ ಗ್ರಾಮದ ಅಭಿವೃದ್ಧಿಗಾಗಿ ಐದು ಕೋಟಿ ನೀಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.