ನವದೆಹಲಿ: ಸಾಂಪ್ರದಾಯಿಕ ‘ಹಲ್ವಾ ಸಮಾರಂಭ’ದ ಮೂಲಕ ಕೇಂದ್ರ ಸರ್ಕಾರದ 2020–21ನೇ ಸಾಲಿನ ಬಜೆಟ್ ದಾಖಲೆಗಳ ಮುದ್ರಣ ಪ್ರಕ್ರಿಯೆಗೆ ಸೋಮವಾರ ಇಲ್ಲಿ ಚಾಲನೆ ನೀಡಲಾಯಿತು.
ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಸಚಿವಾಲಯದ ಎಲ್ಲ ಸಿಬ್ಬಂದಿಗೆ ಸಿಹಿ ವಿತರಿಸಿದರು.
ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್, ರೆವಿನ್ಯೂ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅತನು ಚಕ್ರವರ್ತಿ, ಡಿಐಪಿಎಎಂ ಕಾರ್ಯದರ್ಶಿ ಟಿ.ಕೆ. ಪಾಂಡೆ ಮತ್ತು ವೆಚ್ಚ ಕಾರ್ಯದರ್ಶಿ ಟಿ.ವಿ. ಸೋಮನಾಥನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದೊಡ್ಡ ಕಡಾಯಿಯಲ್ಲಿ ಸಿಹಿ ತಿನಿಸು ತಯಾರಿಸಿ, ಹಂಚಲಾಗುತ್ತದೆ. ಹಲ್ವಾವಿತರಿಸಿದ ನಂತರ,ಬಜೆಟ್ ತಯಾರಿಕೆ ಮತ್ತು ಮುದ್ರಣ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಬಹುತೇಕ ಸಿಬ್ಬಂದಿಯುಬಜೆಟ್ ಮಂಡನೆಯಾಗುವವರೆಗೆ ಕಚೇರಿಯಲ್ಲಿಯೇ ಉಳಿಯಲಿದ್ದಾರೆ.
ಈ ಅವಧಿಯಲ್ಲಿ ಅವರು ತಮ್ಮ ಕುಟುಂಬದ ಸದಸ್ಯರನ್ನು ಯಾವುದೇ ಬಗೆಯಲ್ಲಿ (ಮೊಬೈಲ್, ಇ–ಮೇಲ್) ಸಂಪರ್ಕಿಸುವಂತಿಲ್ಲ. ಹಿರಿಯ ಅಧಿಕಾರಿಗಳಷ್ಟೆ ಮನೆಗೆ ತೆರಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.