ADVERTISEMENT

Union Budget 2024: ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ನಿರ್ಮಲಾ ಸೀತಾರಾಮನ್‌

ಪಿಟಿಐ
Published 22 ಜುಲೈ 2024, 7:20 IST
Last Updated 22 ಜುಲೈ 2024, 7:20 IST
<div class="paragraphs"><p>ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ನಿರ್ಮಲಾ ಸೀತಾರಾಮನ್‌</p></div>

ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ನಿರ್ಮಲಾ ಸೀತಾರಾಮನ್‌

   

ಪಿಟಿಐ ಚಿತ್ರ

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅಂಕಿ ಅಂಶಗಳೊಂದಿಗೆ ಆರ್ಥಿಕ ಸಮೀಕ್ಷೆ ವರದಿ 2023–24 ಅನ್ನು ಮಂಡಿಸಿದರು.

ADVERTISEMENT

ಆರ್ಥಿಕ ಸಮೀಕ್ಷೆಯು ದೇಶದ ಆರ್ಥಿಕತೆಯ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬಜೆಟ್‌ಗೆ ಮುಂಚಿತವಾಗಿ ಸರ್ಕಾರವು ಪ್ರಸ್ತುತಪಡಿಸುವ ವಾರ್ಷಿಕ ದಾಖಲೆಯಾಗಿದೆ.

ದೇಶದ ಆರ್ಥಿಕತೆಯ ಅಲ್ಪಾವಧಿ ಮತ್ತು ಮಧ್ಯಮ ಅವಧಿಯ ನಿರೀಕ್ಷೆಗಳ ಅವಲೋಕನವನ್ನು ಸಹ ಇದು ಒದಗಿಸುತ್ತದೆ.

ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗದಿಂದ ಈ ವರದಿಯನ್ನು ಸಿದ್ಧಪಡಿಸಲಾಗುತ್ತದೆ.

ಆಯವ್ಯಯದ ದಾಖಲೆಯೊಂದಿಗೆ 1950–51ರಲ್ಲಿ ಮೊದಲ ಬಾರಿಗೆ ಆರ್ಥಿಕ ಸಮೀಕ್ಷೆ ವರದಿ ಮಂಡನೆ ಜಾರಿಗೆ ಬಂದಿತು. 

1960ರಲ್ಲಿ ಅದನ್ನು ಕೇಂದ್ರ ಬಜೆಟ್‌ನಿಂದ ಬೇರ್ಪಡಿಸಿ ಬಜೆಟ್‌ ಮಂಡನೆಯ ಹಿಂದಿನ ದಿನ ಮಂಡನೆಯಾಗುವಂತೆ ನೀತಿ ರೂಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.