ADVERTISEMENT

ಮಕ್ಕಳ ಆಯವ್ಯಯ ಘೋಷಿಸಿದ ಸರ್ಕಾರ: ಏನಿದೆ ಈ ಬಜೆಟ್‌ನಲ್ಲಿ?    

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 9:33 IST
Last Updated 5 ಮಾರ್ಚ್ 2020, 9:33 IST
   

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸರ್ಕಾರ ಮಕ್ಕಳ ಬಜೆಟ್‌ ಮಂಡಿಸಿರುವುದಾಗಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿಕೊಂಡಿದ್ದಾರೆ.

2020–21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳೆಲ್ಲವನ್ನೂ ಕ್ರೋಢೀಕರಿಸಿ 279 ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ. ಇದಕ್ಕಾಗಿ ಒಟ್ಟಾರೆ ಬಜೆಟ್‌ನಲ್ಲಿ ಶೇ. 15.28ರಷ್ಟು... ಅಂದರೆ ₹36,340 ಕೋಟಿ ಹಣ ನೀಡಿರುವುದಾಗಿ ಹೇಳಲಾಗಿದೆ.

ಆದರೆ, 279 ಕಾರ್ಯಕ್ರಮಗಳು ಯಾವುವು? ಯಾವ್ಯಾವ ಕಾರ್ಯಕ್ರಮಕ್ಕೆ ಎಷ್ಟು ಹಣ ನಿಗದಿ ಮಾಡಲಾಗಿದೆ ಎಂಬುದರ ಕುರಿತು ವಿವರಣೆಗಳಿಲ್ಲ. 279 ಕಾರ್ಯಕ್ರಮಗಳು ಶಿಕ್ಷಣ, ಆರೋಗ್ಯ, ಮಹಿಳೆ ಮಕ್ಕಳ ಕಲ್ಯಾಣ ಇಲಾಖೆಗಳ ಕಾರ್ಯಕ್ರಮಗಳನ್ನೂ ಒಳಗೊಂಡಿವೆಯೇ ಅಥವಾ ಪ್ರತ್ಯೇಕವಾಗಿ ಇಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿದೆಯೇ,₹36,340 ಕೋಟಿ ಹಣವನ್ನು ಪ್ರತ್ಯೇಕವಾಗಿ ನಿಗದಿ ಮಾಡಲಾಗಿದೆಯೇ ಎಂಬುದನ್ನು ತಿಳಿಸಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.